ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 24/02/2020

By blogger on ಸೋಮವಾರ, ಫೆಬ್ರವರಿ 24, 2020

                             

                                 ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 24/02/2020

ವಡಗೇರಾ ಪೊಲೀಸ ಠಾಣೆ ಗುನ್ನೆ ನಂ:- 18/2020 ಕಲಂ:504,324,323 ಐಪಿಸಿ:- ಇಂದು ದಿನಾಂಕ: 24/02/2020 ರಂದು 6-15 ಪಿಎಮ್ ಕ್ಕೆ ಶ್ರೀ ಲಚಮಪ್ಪ ತಂದೆ ಸಾಬಣ್ಣ ಬಾಡದವರ, ವ:60, ಜಾ:ಕಬ್ಬೇರ, ಉ:ಕೂಲಿ ಸಾ:ಕುರುಕುಂದಿ ತಾ:ವಡಗೇರಾ ಇವರು ಠಾಣೆಗೆ ಹಾಜರಾಗಿ ಸಲ್ಲಿಸಿದ ದೂರು ಅಜರ್ಿ ಸಾರಾಂಶವೆನಂದರೆ ನನ್ನ ಮಗ ಶರಣಪ್ಪ ತಂದೆ ಲಚಮಪ್ಪ ಈತನಿಗೆ ನಮ್ಮೂರ ನಮ್ಮ ಜಾತಿಯ ಬಸವರಾಜ ತಂದೆ ಹಣಮಂತ ನಾಟೇಕಾರ ಸಾ:ಕುರುಕುಂದಾ ಈತನು ಈಗ ಸುಮಾರು 7-8 ದಿವಸಗಳ ಹಿಂದೆ ವಿನಾಕಾರಣ ಬಂದು ಜಗಳ ತೆಗೆದು ಮಗನೆ ಶಾಣ್ಯಾ ಊರಲ್ಲಿ ನಿಂದು ಬಹಳ ಆಗ್ಯಾದ ನಿನಗೆ ನೋಡಿಕೊಳ್ಳುತ್ತೇನೆ ಎಂದು ಅವಾಜ ಹಾಕಿ ಹೋಗಿದ್ದನು. ಆದರು ನಾವು ಸುಮ್ಮನಾಗಿದ್ದೇವು. ಹೀಗಿದ್ದು ಇಂದು ದಿನಾಂಕ: 24/02/2020 ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾನು ಮತ್ತು ನನ್ನ ಮಗ ಶರಣಪ್ಪ ಇಬ್ಬರೂ ನಮ್ಮ ಮನೆ ಮುಂದೆ ಇದ್ದಾಗ ನಮ್ಮೂರ ಬಸವರಾಜ ತಂದೆ ಹಣಮಂತ ನಾಟೇಕಾರ ಈತನು ಬಂದು ನನ್ನ ಮಗ ಶರಣಪ್ಪನಿಗೆ ಏ ಮಗನೆ ಶಾಣ್ಯಾ ಊರಲ್ಲಿ ನೀನು ನನ್ನ ಎದರು ಎದೆ ಉಬ್ಬಿಸಿಕೊಂಡು ತಿರುಗಾಡುತ್ತಿ ಮಗನೆ ಎಂದು ಜಗಳ ತೆಗೆದು ಅವನಿಗೆ ಹಿಡಿದು ಕೈಯಿಂದ ಹೊಡೆಯುತ್ತಿದ್ದಾಗ ನಾನು ನಡುವೆ ಬಿಡಿಸಲು ಹೋದರೆ ನನಗೆ ಏ ಮಗನೆ ಮುದುಕಾ ನೀನು ನಡುವೆ ಬರುತ್ತಿ ಭೊಸುಡಿ ಮಗನೆ ನಿನಗೆ ಮಾಡುತ್ತೇನೆ ಬಾ ಎಂದು ಜಗಳ ತೆಗೆದು ಅಲ್ಲಿಯೇ ಬಿದ್ದ ಕಟ್ಟಿಗೆ ತೆಗೆದುಕೊಂಡು ನನ್ನ ಎಡಗಡೆ ತೆಲೆಗೆ ಹೊಡೆದು ರಕ್ತಗಾಯ ಮಾಡಿದನು. ಆಗ ನಮ್ಮೂರ ದೇವಪ್ಪ ತಂದೆ ಅಯ್ಯಪ್ಪ ಬಾಡದವರ ಮತ್ತು ದೇವಪ್ಪ ತಂದೆ ಸಿದ್ದಪ್ಪ ಹಾವಣ್ಣೋರ ಇವರಿಬ್ಬರೂ ಬಂದು ನಮ್ಮ ತಂದೆಗೆ ಹೊಡೆಯುವುದನ್ನು ಬಿಡಿಸಿಕೊಂಡರು. ಅಲ್ಲಿಂದ ನಾವು ಯಾದಗಿರಿ ಸರಕಾರಿ ಆಸ್ಪತ್ರೆಗೆ ಬಂದು ಸೇರಿಕೆಯಾಗಿದ್ದು, ವೈದ್ಯಾಧಿಕಾರಿಗಳು ಎಮ್.ಎಲ್.ಸಿ ಮಾಡಿರುತ್ತಾರೆ. ಆಗ ವಡಗೇರಾ ಠಾಣೆ ಪೊಲೀಸರು ಎಮ್.ಎಲ್.ಸಿ ವಿಚಾರಣೆ ಮಾಡಲು ಬಂದಾಗ ನಾವು ನಮ್ಮ ಹಿರಿಯರಿಗೆ ವಿಚಾರ ಮಾಡಿಕೊಂಡು ದೂರು ಕೊಡುವುದಿದ್ದರೆ ಪೊಲೀಸ್ ಠಾಣೆಗೆ ಬಂದು ದೂರು ಕೊಡುತ್ತೇವೆ ಎಂದು ತಿಳಿಸಿರುತ್ತೇವೆ. ಈಗ ನಮ್ಮ ಹಿರಿಯರಿಗೆ ವಿಚಾರ ಮಾಡಿದಾಗ ಪೊಲೀಸ್ ಠಾಣೆಗೆ ಹೋಗಿ ದೂರು ಕೊಡಿ ಎಂದು ಹೇಳಿದ್ದರಿಂದ ಈಗ ಪೊಲೀಸ್ ಠಾಣೆಗೆ ಬಂದು ಈ ದೂರು ಅಜರ್ಿ ಸಲ್ಲಿಸುತ್ತಿದ್ದೇವೆ. ವಿನಾಕಾರಣ ನಮಗೆ ಅವಾಚ್ಯ ಬೈದು ಕಟ್ಟಿಗೆ ಮತ್ತು ಕೈಯಿಂದ ಹೊಡೆಬಡೆ ಮಾಡಿದ ಬಸವರಾಜನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲು ವಿನಂತಿ ಎಂದು ಕೊಟ್ಟ ದೂರಿನ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂ. 18/2020 ಕಲಂ: 504,323,324 ಐಪಿಸಿ ಪ್ರಕಾರ ಗುನ್ನೆ ದಾಖಲ ಮಾಡಿಕೊಂಡು ತನಿಖೆ ಕೈಕೊಂಡೆನು.  

ಗೋಗಿ ಪೊಲೀಸ ಠಾಣೆ ಗುನ್ನೆ ನಂ:- 15/2020 ಕಲಂ, 78(3) ಕೆ.ಪಿ.ಆ್ಯಕ್ಟ್:- ಇಂದು ದಿನಾಂಕ: 24/02/2020 ರಂದು 08.45 ಪಿ.ಎಮ್ ಕ್ಕೆ ಠಾಣೆಯ ಎಸ್.ಹೆಚ್.ಡಿ ಕರ್ತವ್ಯದಲ್ಲಿದ್ದಾಗ ಶ್ರೀ ಸೋಮಲಿಂಗ ಒಡೆಯರ ಪಿ.ಎಸ್.ಐ ಸಾಹೇಬರು ಒಬ್ಬ ಆರೋಪಿ ಮತ್ತು ಜಪ್ತಿಪಂಚನಾಮೆ ಮುದ್ದೇಮಾಲು ದೊಂದಿಗೆ ಠಾಣೆಗೆ ಬಂದು ಕ್ರಮ ಕೈಕೊಳ್ಳುವಂತೆ ಸೂಚಿಸಿ ವರದಿ ನೀಡಿದ್ದು ವರದಿಯ  ಸಾರಾಂಶವೆನೆಂದರೆ, ಇಂದು ದಿನಾಂಕ: 24/02/2020 ರಂದು 05.45 ಪಿಎಂಕ್ಕೆ  ಪಿ.ಎಮ್ ಕ್ಕೆ ಗೋಗಿ ಪೇಠ ಗ್ರಾಮದ ಬಸ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ಮಟಕ ಜೂಜಾಟದ ನಂಬರ ಬರೆದುಕೊಳ್ಳುತ್ತಿದ್ದಾನೆ ಅಂತಾ ಬಾತ್ಮಿ ಬಂದಿದ್ದರಿಂದ ಮಾನ್ಯ ನ್ಯಾಯಾಲಯ ದಿಂದ ದಾಳಿ ಮಾಡಲು ಅನುಮತಿ ಪಡೆದುಕೊಂಡು, ನಂತರ ಸಿಬ್ಬಂದಿಯವರು ಮತ್ತು ಪಂಚರ ಸಮಕ್ಷಮದಲ್ಲಿ ದಾಳಿ ಕುರಿತು ಹೋಗಿ ಆರೋಪಿತನಾಧ ರಾಜಕುಮಾರ ತಂದೆ ತಿಪ್ಪಣ್ಣ ಜಿಂದೆ ವ:33 ಉ: ಪಾನ್ಶಾಪ ಜಾ: ಸ್ವಖುಳಿ ಸಾಳಿ ಸಾ; ಗೋಗಿ ಪೇಠ ತಾ: ಶಹಾಪೂರ ಜಿ: ಯಾದಗಿರಿ ಈತನು ಸಾರ್ವಜನಿಕರಿಂದ ಹಣ ಪಡೆದುಕೊಂಡು ಬಾಂಬೆ, ಕಲ್ಯಾಣ ಮಟಕಾ ಚೀಟಿ ಬರೆದುಕೊಳ್ಳುತ್ತಿರುವಾಗ ಪಂಚರ ಸಮಕ್ಷಮ ಸಿಬ್ಬಂದಿಯವರ ಸಹಾಯದಿಂದ 07.25 ಪಿಎಂ ಕ್ಕೆ ದಾಳಿ ಮಾಡಿ ಹಿಡಿದು ಸದರಿಯವನಿಂದ ನಗದು ಹಣ 2710/- ರೂ. ಹಾಗೂ ಒಂದು ಮಟಕಾ ಚೀಟಿ ಮತ್ತು ಒಂದು ಬಾಲ್ ಪೆನ್ನನ್ನು ಪಂಚರ ಸಮಕ್ಷಮ ಜಪ್ತಿಪಡಿಸಿಕೊಂಡಿದ್ದು ಸದರಿಯವನ ವಿರುದ್ದ ಕಲಂ, 78(3) ಕೆ.ಪಿ.ಆಕ್ಟ್ ನೇದ್ದರಡಿಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಿದ ವರದಿಯ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ: 15/2020 ಕಲಂ, 78 (3) ಕೆ.ಪಿ. ಆಕ್ಟ್ ನೇದ್ದರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ. 
ಗೋಗಿ ಪೊಲೀಸ ಠಾಣೆ ಗುನ್ನೆ ನಂ:- 03/2020 ಕಲಂ:110 (ಇ ಮತ್ತು ಜಿ) ಸಿಆರ್ಪಿಸಿ:-ಇಂದು ದಿನಾಂಕ: 24/02/2020 ರಂದು ನಾನು ಗೋಗಿ ಪೇಠ ಗ್ರಾಮದಲ್ಲಿ ಪೆಟ್ರೋಲಿಂಗ್ ಕರ್ತವ್ಯದಲ್ಲಿ ಇದ್ದಾಗ ಗೋಗಿ ಪೇಠ ಗ್ರಾಮದ ಬಸ್ ನಿಲ್ದಾಣ ಹತ್ತಿರ ರೋಡಿನಲ್ಲಿ, ಸಾರ್ವಜನಿಕ ರಸ್ತೆಯ ಮೇಲೆ 10.25 ಎ.ಎಂ ಸುಮಾರಿಗೆ ಒಬ್ಬ ವ್ಯಕ್ತಿಯು ಹೊಗಿ ಬರುವ ಜನರೊಂದಿಗೆ ಅಸಬ್ಯ ರೀತಿಯಿಂದ ವರ್ತನೆ ಮಾಡುತ್ತಾ ಹೆಣ್ಣು ಮಕ್ಕಳಿಗೆ ಬೈಯುತ್ತಾ, ಕೈಯಲ್ಲಿ ಕಲ್ಲುಗಳನ್ನು ಹಿಡಿದುಕೊಂಡು ಹೋಗಿ ಬರುವ ಜನರಿಗೆ ಹೇದರಿಸುವದು ಬೇದರಿಸುವದು ಮಾಡವದನ್ನು ಕಂಡು ಸದರಿಯವನನ್ನು ಹೀಗೆ ಬಿಟ್ಟರೆ ಸಾರ್ವಜನಿಕರೊಂದಿಗೆ ತಕರಾರು ಮಾಡಿ ಜಗಳ ಮಾಡಿಕೊಂಡು ಸಾರ್ವಜನಿಕ ಶಾಂತತೆಗೆ ಭಂಗಉಂಟು ಮಾಡುವ ಸಂಬವ ಹೆಚ್ಚಾಗಿ ಕಂಡು ಬಂದಿದ್ದರಿಂದ ಸದರಿಯವರನ್ನು 10.30 ಎಎಂಕ್ಕೆ ದಸ್ತಗಿರಿ ಮಾಡಿಕೊಂಡು 10.45 ಎಎಂ.ಕ್ಕೆ ಠಾಣೆಗೆ ಬಂದು ಸದರಿಯವರ ವಿರುದ್ದ ಮುಂಜಾಗೃತ ಕ್ರಮವಾಗಿ ಗೋಗಿ ಪೊಲೀಸ್ ಠಾಣೆಯ ಪಿ.ಎ.ಆರ್ ನಂ:03/2020 ಕಲಂ, 110 (ಇ) (ಜಿ)  ಸಿ.ಆರ್.ಪಿ.ಸಿ ನೇದ್ದರ ಅಡಿಯಲ್ಲಿ ಪಿ.ಎ.ಆರ್. ದಾಖಲು ಮಾಡಿಕೊಂಡು ಮುಂಜಾಗೃತಾಕ್ರಮ ಜರುಗಿಸಿದ್ದು ಇರುತ್ತದೆ

ಶೋರಾಪೂರ ಪೊಲೀಸ್ ಠಾಣೆ ಗುನ್ನೆ ನಂ:-. 55/2020 ಕಲಂ: 78 () ಕೆ.ಪಿ. ಕಾಯ್ದೆ :-        ಇಂದು ದಿನಾಂಕ:24/02/2020 ರಂದು 4-45 ಪಿ.ಎಮ್. ಕ್ಕೆ ಠಾಣೆಯ ಎಸ್.ಹೆಚ್.ಡಿ. ಕರ್ತವ್ಯದಲ್ಲಿದ್ದಾಗ ಶ್ರೀ ಆನಂದರಾವ್ ಎಸ್.ಎನ್ ಪಿಐ ಸಾಹೇಬರು ಒಬ್ಬ ಆರೋಪಿತರೊಂದಿಗೆ ಜಪ್ತಿ ಪಂಚನಾಮೆ ಹಾಗು ಮುದ್ದೆಮಾಲು ಹಾಜರಪಡಿಸಿ ವರದಿ ನೀಡಿದ್ದು, ಸಾರಾಂಶವೆನೆಂದರೆ, ಇಂದು ದಿನಾಂಕ:24/02/2020 ರಂದು 1-30 ಪಿ.ಎಮ್. ಸುಮಾರಿಗೆ ನಾನು ಠಾಣೆಯಲ್ಲಿದ್ದಾಗ ಖಚಿತವಾದ ಮಾಹಿತಿ ಬಂದಿದ್ದೆನೆಂದರೆ ಸುರಪೂರ ಠಾಣಾ ವ್ಯಾಪ್ತಿಯ ಬೈರಿಮಡ್ಡಿ ಗ್ರಾಮದ ಚಿಕ್ಕಯ್ಯ ತಾತನ ಗುಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಯಾರೋ ಒಬ್ಬ ವ್ಯಕ್ತಿಯು ಜನರಿಂದ ಹಣ ಪಡೆದು ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದಾನೆ ಅಂತಾ ಬಾತ್ಮಿ ಬಂದ ಮೇರೆಗೆ ಠಾಣೆಯಲ್ಲಿದ್ದ ಠಾಣೆಯ ಸಿಬ್ಬಂದಿಯವರಾದ 1) ಶ್ರೀ ಮನೋಹರ ಹೆಚ್ಸಿ-105, 2) ಶ್ರೀ ಮಂಜುನಾಥ ಹೆಚ್ಸಿ-176 3) ಸುಭಾಸ್ ಸಿಪಿಸಿ-174, ಇವರಿಗೆ ವಿಷಯ ತಿಳಿಸಿ ಸುಭಾಸ್ ಸಿಪಿಸಿ ಇವರಿಗೆ ಪಂಚರನ್ನು ಕರೆತರಲು ಹೇಳಿದ ಪ್ರಕಾರ ಸುಭಾಸ್ ಸಿಪಿಸಿ ರವರು ಇಬ್ಬರು ಪಂಚರಾದ 1) ಶ್ರೀ ಜಲಾಲಸಾಬ ತಂದೆ ಬಡೆಸಾಬ ಚೌದ್ರಿ ವ|| 56 ವರ್ಷ ಜಾ|| ಮುಸ್ಲಿಂ ಉ|| ಡ್ರೈವರ ಸಾ|| ದೇವಾಪೂರ 2) ಕೃಷ್ಣಪ್ಪ ತಂದೆ ಅಯ್ಯಪ್ಪ ಡೊಳ್ಳ ವ|| 55 ವರ್ಷ ಜಾ|| ಕುರಬರ ಉ|| ಕೂಲಿಕೆಲಸ ಸಾ|| ವೆಂಕಟಾಪೂರ ಇವರನ್ನು ಪಂಚರು ಅಂತಾ ಬರಮಾಡಿಕೊಂಡು ಸದರಿಯವರಿಗೆ ವಿಷಯವನ್ನು ತಿಳಿಸಿ, ಅವರಿಗೆ ಪಂಚರಾಗಲು ಸಹಕರಿಸಿ ಅಂತಾ ಕೇಳಿದ್ದಕ್ಕೆ 
ಅವರು ಅದಕ್ಕೆ ಒಪ್ಪಿಕೊಂಡಿದ್ದು ಸದರಿ ಪಂಚರು ಮತ್ತು ಮೇಲ್ಕಂಡ ಠಾಣೆಯ ಸಿಬ್ಬಂದಿಯವರೊಂದಿಗೆ 02:00 ಪಿ.ಎಮ್ ಕ್ಕೆ ಠಾಣೆಯ ಜೀಪ್ ನಂ.ಕೆಎ-33, ಜಿ-0238 ನೇದ್ದರಲ್ಲಿ ಹೊರಟು 02:45 ಪಿ.ಎಮ್ ಕ್ಕೆ ಬೈರಿಮಡ್ಡಿ ಗ್ರಾಮದ ಚಿಕ್ಕಯ್ಯ ತಾತನ ಗುಡಿಯ ಹತ್ತಿರ ಹೋಗಿ ವಾಹನ ಮರೆಯಾಗಿ ನಿಲ್ಲಿಸಿ ಎಲ್ಲರೂ ಕೆಳಗೆ ಇಳಿದು ಮರೆಯಾಗಿ ನಿಂತು ನೋಡಲು ಚಿಕ್ಕಯ್ಯ ತಾತನ ಗುಡಿಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ನಿಂತುಕೊಂಡು ಒಂದು ರೂಪಾಯಿಗೆ 80 ರೂಪಾಯಿ ಗೆಲ್ಲಿರಿ, ಮಟಕಾ ನಂಬರ ಬರೆಯಿಸಿ ಅದೃಷ್ಟವಂತರಾಗಿರಿ ಅಂತ ಹೋಗಿ ಬರುವ ಜನರಿಗೆ ಕೂಗಿ ಕರೆಯುತ್ತಾ ಜನರಿಂದ ಹಣ ಪಡೆದು, ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದನ್ನು ಖಚಿತಪಡಿಸಿಕೊಂಡು, ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ 02-50 ಪಿ.ಎಮ್ ಕ್ಕೆ ದಾಳಿ ಮಾಡಿ ಹಿಡಿದು ಅವನ ಅಂಗಶೋಧನೆ ಮಾಡಿ ಹೆಸರು ವಿಳಾಸ ವಿಚಾರಿಸಲಾಗಿ ತನ್ನ ಹೆಸರು ಮೈಲಾರೆಪ್ಪ ತಂದೆ ನಾಗಪ್ಪ ಯಾದವ ವಯಾ:36 ವರ್ಷ ಉ: ಕೂಲಿ ಜಾತಿ: ಗೊಲ್ಲರ ಸಾ:ಬೈರಿಮಡ್ಡಿ ತಾ:ಸುರಪೂರ ಅಂತಾ ತಿಳಿಸಿದ್ದು, ಸದರಿಯವನು ತಾನು ಮಟಕಾ ನಂಬರ ಬರೆದುಕೊಂಡು ಸಾರ್ವಜನಿಕರಿಂದ ಹಣ ಪಡೆದುಕೊಳ್ಳುತ್ತಿದ್ದ ಬಗ್ಗೆ ಒಪ್ಪಿಕೊಂಡಿದ್ದು, ಸದರಿಯವನ ಅಂಗಶೋಧನೆ ಮಾಡಲಾಗಿ ಸದರಿಯವರ ಹತ್ತಿರ  ನಗದು ಹಣ 720=00 ರೂಗಳು, ಒಂದು ಮಟಕಾ ನಂಬರ್ ಬರೆದ ಚೀಟಿ ಅ.ಕಿ.00=00, ಒಂದು ಬಾಲ್ ಪೆನ್ ಅ.ಕಿ 00=00, ನೇದ್ದವುಗಳು ದೊರೆತಿದ್ದು ಅವುಗಳನ್ನು ಕೇಸಿನ ಮುಂದಿನ ಪುರಾವೆ ಕುರಿತು ಪಂಚರ ಸಮಕ್ಷಮ ಜಪ್ತಿಪಡಿಸಿಕೊಂಡು, ಸದರಿ ಜಪ್ತಿ ಪಂಚನಾಮೆಯನ್ನು 3 ಪಿ.ಎಮ್ ದಿಂದ 4 ಪಿ.ಎಮ್ದ ವರೆಗೆ ಪಂಚನಾಮೆ ಬರೆದುಕೊಂಡು, ಮರಳಿ ಠಾಣೆಗೆ ಬಂದು ಸದರಿ ಜಪ್ತಿ ಪಂಚನಾಮೆ ಮತ್ತು ಆರೋಪಿತನೊಂದಿಗೆ ಮುದ್ದೆಮಾಲನ್ನು ಹಾಜರುಪಡಿಸುತ್ತಿದ್ದು ಆರೋಪಿತನ ವಿರುದ್ಧ ಸೂಕ್ತ ಕಾನೂನಿನ ಕ್ರಮ ಜರುಗಿಸಲು ಸೂಚಿಸಿದ ಮೇರೆಗೆ ಠಾಣೆ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ. 

ಶೋರಾಪೂರ ಪೊಲೀಸ್ ಠಾಣೆ ಗುನ್ನೆ ನಂ:- 56/2020 ಕಲಂ: 78 () ಕೆ.ಪಿ. ಕಾಯ್ದೆ  :- ಇಂದು ದಿನಾಂಕ:24/02/2020 ರಂದು 10 ಪಿ.ಎಮ್. ಕ್ಕೆ ಠಾಣೆಯ ಎಸ್.ಹೆಚ್.ಡಿ. ಕರ್ತವ್ಯದಲ್ಲಿದ್ದಾಗ ಶ್ರೀ ಶರಣಪ್ಪ ಹವಾಲ್ದಾರ ಪಿ.ಎಸ್.ಐ (ಅ.ವಿಭಾಗ) ಸಾಹೇಬರು ಒಬ್ಬ ಆರೋಪಿತರೊಂದಿಗೆ ಜಪ್ತಿ ಪಂಚನಾಮೆ ಹಾಗು ಮುದ್ದೆಮಾಲು ಹಾಜರಪಡಿಸಿ ವರದಿ ನೀಡಿದ್ದು, ಸಾರಾಂಶವೆನೆಂದರೆ, ಇಂದು ದಿನಾಂಕ:24/02/2020 ರಂದು 6 ಪಿ.ಎಮ್. ಸುಮಾರಿಗೆ ನಾನು ಠಾಣೆಯಲ್ಲಿದ್ದಾಗ ಖಚಿತವಾದ ಮಾಹಿತಿ ಬಂದಿದ್ದೆನೆಂದರೆ ಸುರಪೂರ ಠಾಣಾ ವ್ಯಾಪ್ತಿಯ ಕವಡಿಮಟ್ಟಿ ಗ್ರಾಮದ ಬಸ್ ನಿಲ್ದಾಣದ ಚೌಡಯ್ಯನ ಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಯಾರೋ ಒಬ್ಬ ವ್ಯಕ್ತಿಯು ಜನರಿಂದ ಹಣ ಪಡೆದು ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದಾನೆ ಅಂತಾ ಬಾತ್ಮಿ ಬಂದ ಮೇರೆಗೆ ಠಾಣೆಯಲ್ಲಿದ್ದ ಠಾಣೆಯ ಸಿಬ್ಬಂದಿಯವರಾದ 1) ಶ್ರೀ ಮನೋಹರ ಹೆಚ್ಸಿ-105, 2) ಶ್ರೀ ಮಂಜುನಾಥ ಹೆಚ್ಸಿ-176 3) ಸುಭಾಸ್ ಸಿಪಿಸಿ-174, ಇವರಿಗೆ ವಿಷಯ ತಿಳಿಸಿ ಸುಭಾಸ್ ಸಿಪಿಸಿ ಇವರಿಗೆ ಪಂಚರನ್ನು ಕರೆತರಲು ಹೇಳಿದ ಪ್ರಕಾರ ಸುಭಾಸ್ ಸಿಪಿಸಿ ರವರು ಇಬ್ಬರು ಪಂಚರಾದ 1) ಶ್ರೀ ಮಲ್ಲಿಕಾಜರ್ುನ್ ತಂದೆ ಆದಪ್ಪ ಕೆಂಗೂರಿ ವ|| 50 ವರ್ಷ ಜಾ|| ಕುರುಬರ ಉ|| ಒಕ್ಕಲುತನ ಸಾ|| ಕಚಡಿಮಟ್ಟಿ ತಾ:ಸುರಪೂರ 2) ಅಯ್ಯಪ್ಪ ತಂದೆ ನಿಂಗಪ್ಪ ಕೆಂಗೂರಿ ವ|| 45 ವರ್ಷ ಜಾ|| ಕುರಬರ ಉ|| ಒಕ್ಕಲುತನ ಸಾ|| ಕವಡಿಮಟ್ಟಿ ಇವರನ್ನು ಪಂಚರು ಅಂತಾ ಬರಮಾಡಿಕೊಂಡು ಸದರಿಯವರಿಗೆ ವಿಷಯವನ್ನು ತಿಳಿಸಿ, ಅವರಿಗೆ ಪಂಚರಾಗಲು ಸಹಕರಿಸಿ ಅಂತಾ ಕೇಳಿದ್ದಕ್ಕೆ ಅವರು ಅದಕ್ಕೆ ಒಪ್ಪಿಕೊಂಡಿದ್ದು ಸದರಿ ಪಂಚರು ಮತ್ತು ಮೇಲ್ಕಂಡ ಠಾಣೆಯ ಸಿಬ್ಬಂದಿಯವರೊಂದಿಗೆ 06:15 ಪಿ.ಎಮ್ ಕ್ಕೆ ಠಾಣೆಯ ಜೀಪ್ ನಂ.ಕೆಎ-33, ಜಿ-0094 ನೇದ್ದರಲ್ಲಿ ಹೊರಟು 06:45 ಪಿ.ಎಮ್ ಕ್ಕೆ ಕವಡಿಮಟ್ಟಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಹೋಗಿ ವಾಹನ ಮರೆಯಾಗಿ ನಿಲ್ಲಿಸಿ ಎಲ್ಲರೂ ಕೆಳಗೆ ಇಳಿದು ಮರೆಯಾಗಿ ನಿಂತು ನೋಡಲು ಚೌಡಯ್ಯನ ಕಟ್ಟೆಯ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿಯು ನಿಂತುಕೊಂಡು ಒಂದು ರೂಪಾಯಿಗೆ 80 ರೂಪಾಯಿ ಗೆಲ್ಲಿರಿ, ಮಟಕಾ ನಂಬರ ಬರೆಯಿಸಿ ಅದೃಷ್ಟವಂತರಾಗಿರಿ ಅಂತ ಹೋಗಿ ಬರುವ ಜನರಿಗೆ ಕೂಗಿ ಕರೆಯುತ್ತಾ ಜನರಿಂದ ಹಣ ಪಡೆದು, ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದನ್ನು ಖಚಿತಪಡಿಸಿಕೊಂಡು, ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ 06-50 ಪಿ.ಎಮ್ ಕ್ಕೆ ದಾಳಿ ಮಾಡಿ ಹಿಡಿದು ಅವನ ಅಂಗಶೋಧನೆ ಮಾಡಿ ಹೆಸರು ವಿಳಾಸ ವಿಚಾರಿಸಲಾಗಿ ತನ್ನ ಹೆಸರು ಭೀಮಣ್ಣ ತಂದೆ ನಿಂಗಪ್ಪ ಎಳಿಮೇಲಿ ವಯಾ:35 ವರ್ಷ ಉ:ಒಕ್ಕಲುತನ ಜಾ:ಕುರುಬರ ಸಾ:ಆಲ್ದಾಳ ತಾ:ಸುರಪೂರ ಅಂತಾ ತಿಳಿಸಿದ್ದು, ಸದರಿಯವನು ತಾನು ಮಟಕಾ ನಂಬರ ಬರೆದುಕೊಂಡು ಸಾರ್ವಜನಿಕರಿಂದ ಹಣ ಪಡೆದುಕೊಳ್ಳುತ್ತಿದ್ದ ಬಗ್ಗೆ ಒಪ್ಪಿಕೊಂಡಿದ್ದು, ಸದರಿಯವನ ಅಂಗಶೋಧನೆ ಮಾಡಲಾಗಿ ಸದರಿಯವರ ಹತ್ತಿರ  ನಗದು ಹಣ 7670=00 ರೂಗಳು, ಒಂದು ಮಟಕಾ ನಂಬರ್ ಬರೆದ ಚೀಟಿ ಅ.ಕಿ.00=00, ಒಂದು ಬಾಲ್ ಪೆನ್ ಅ.ಕಿ 00=00, ನೇದ್ದವುಗಳು ದೊರೆತಿದ್ದು ಅವುಗಳನ್ನು ಕೇಸಿನ ಮುಂದಿನ ಪುರಾವೆ ಕುರಿತು ಪಂಚರ ಸಮಕ್ಷಮ ಜಪ್ತಿಪಡಿಸಿಕೊಂಡು, ಸದರಿ ಜಪ್ತಿ ಪಂಚನಾಮೆಯನ್ನು 6:50 ಪಿ.ಎಮ್ ದಿಂದ 7:50 ಪಿ.ಎಮ್ದ ವರೆಗೆ ಜೀಪಿನ ಲೈಟಿನ ಬೆಳಕಿನಲ್ಲಿ  ಪಂಚನಾಮೆ ಬರೆದುಕೊಂಡು, ಮರಳಿ ಠಾಣೆಗೆ ಬಂದು ಸದರಿ ಜಪ್ತಿ ಪಂಚನಾಮೆ ಮತ್ತು ಆರೋಪಿತನೊಂದಿಗೆ ಮುದ್ದೆಮಾಲನ್ನು ಹಾಜರುಪಡಿಸುತ್ತಿದ್ದು ಆರೋಪಿತನ ವಿರುದ್ಧ ಸೂಕ್ತ ಕಾನೂನಿನ ಕ್ರಮ ಜರುಗಿಸಲು ಸೂಚಿಸಿದ ಮೇರೆಗೆ ಠಾಣೆ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ. 



ನಿಮ್ಮ ಅಧಿಕಾರಿಗಳನ್ನು ತಿಳಿಯಿರಿ

ಪೊಲೀಸ್ ಅಧೀಕ್ಷಕರು ಯಾದಗಿರಿ ಜಿಲ್ಲೆ

Rishikesh Bhagawan Sonawane IPS

ಅಧಿಕಾರಿ ಹೆಸರು ದೂರವಾಣಿ ಸಂಖ್ಯೆ
ಡಿ.ಎಸ್.ಪಿ ಶೋರಾಪೂರ ಉಪ-ವಿಭಾಗ 9480803637
ಡಿ.ಎಸ್.ಪಿ ಯಾದಗಿರಿ ಉಪ-ವಿಭಾಗ 9480803526
ಜಿಲ್ಲಾ ಪೊಲೀಸ್ ನಿಸ್ತಂತು ಕೊಣೆ ಯಾದಗಿರಿ 9480803600

ಪ್ರಮುಖವಾದ ಲಿಂಕ್ಗಳು

ಫೋಟೋ ಗ್ಯಾಲರಿ

ಜನಪ್ರಿಯ ಪೋಸ್ಟ್ಗಳು

We are in Facebook

Keep on visiting www.yadgirpolice.in for daily updates from us. .Messege us in facebook

Meet Us in FB!!