ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 17/08/2020

By blogger on ಸೋಮವಾರ, ಆಗಸ್ಟ್ 17, 2020

 


                            ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 17/08/2020                                                                                                                                

ಯಾದಗಿರ ಸಂಚಾರಿ ಪೊಲೀಸ ಠಾಣೆ ಗುನ್ನೆ ನಂ:- 34/2020  ಕಲಂ 279, 304(ಎ) ಐಪಿಸಿ :   ನಿನ್ನೆ ದಿನಾಂಕ 16/08/2020 ರಂದು ಸಾಯಂಕಾಲ 6 ಪಿ.ಎಂ.ಕ್ಕೆ ಯಾದಗಿರಿ-ಹೈದ್ರಾಬಾದ್ ಮುಖ್ಯ ರಸ್ತೆಯ ಮೇಲೆ ಬರುವ ಯಾದಗಿರಿ ಗಂಜ್ ಏರಿಯಾದಲ್ಲಿನ ಶ್ರೀಪಾಲ್ ದಾಲ್ ಮಿಲ್ ಹತ್ತಿರ ಮುಖ್ಯ ರಸ್ತೆಯ ಮೇಲೆ ಈ ಕೇಸಿನ ಮೃತ ಭೀಮಾಶಂಕರ ಈತನು ತನ್ನ ಮೋಟಾರು ಸೈಕಲ್ ನಂ. ಕೆಎ-33, ಇಎ-1221 ನೇದ್ದನ್ನು ಗಂಜ್ ಕಡೆಯಿಂದ ಹೊಸಳ್ಳಿ ಕ್ರಾಸ್ ಕಡೆಗೆ ಅತೀವೇಗ ಮತ್ತು ಅಲಕ್ಷ್ಯತನದಿಂದ ನಡೆಸಿಕೊಂಡು ಹೊರಟಿದ್ದಾಗ ತನ್ನ ಚಾಲನೆ ಮೇಲಿನ ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೇಡರ್ಗೆ ಡಿಕ್ಕಿ ಕೊಟ್ಟಿದ್ದರಿಂದ ಅಪಘಾತವಾಗಿದ್ದು, ಈ ಅಪಘಾತದಲ್ಲಿ ಮೃತನ ತಲೆಗೆ, ಮೆಲಕಿಗೆ ಭಾರೀ ಗುಪ್ತಗಾಯವಾಗಿ ಉಪಚಾರ ಕುರಿತು ಯಾದಗಿರಿ ಸಕರ್ಾರಿ ಆಸ್ಪತ್ರೆಗೆ ಸೇರಿಕೆಯಾಗಿ ನಂತರ ಹೆಚ್ಚಿನ ಉಪಚಾರಕ್ಕಾಗಿ ಕಲಬುರಗಿಯ ಚಿರಾಯು ಆಸ್ಪತ್ರೆಗೆ ಸೇರಿಕೆಯಾಗಿ ಉಪಚಾರ ಪಡೆಯುತ್ತಾ ಉಪಚಾರ ಫಲಕಾರಿಯಾಗದೇ ಇಂದು ದಿನಾಂಕ 17/08/2020 ರಂದು ಸಮಯ 2 ಎ.ಎಂ.ಕ್ಕೆ ಮೃತಪಟ್ಟಿದ್ದು ಇರುತ್ತದೆ ಈ ಬಗ್ಗೆ ಮುಂದಿನ ಕಾನೂನು ಕ್ರಮ ಜರುಗಿಸಿರಿ ಅಂತಾ ಫಿಯರ್ಾದಿ ಹೇಳಿಕೆ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ. 34/2020 ಕಲಂ 279, 304(ಎ) ಐಪಿಸಿ ನೇದ್ದರಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ ಅಂತಾ ಮಾನ್ಯರವರಲ್ಲಿ ವಿನಂತಿ. 

ಶಹಾಪೂರ ಪೊಲೀಸ ಠಾಣೆ ಗುನ್ನೆ ನಂ:- 223/2020.ಕಲಂಃ 78(3) ಕೆ.ಪಿ.ಆ್ಯಕ್ಟ :     ಇಂದು ದಿನಾಂಕ 17/08/2020 ರಂದು 17-00 ಗಂಟೆಗೆ ಸ|| ತ|| ಪಿಯರ್ಾದಿ ಚೆನ್ನಯ್ಯ ಹೀರೆಮಠ ಪಿ.ಐ. ಸಾಹೇಬರು ಠಾಣೆಗೆ ಬಂದು ಒಬ್ಬ ಆರೋಪಿ, ಮುದ್ದೆಮಾಲು, ಜಪ್ತಿಪಂಚನಾಮೆ ಹಾಜರ ಪಡಿಸಿ ವರದಿ ನೀಡಿದ್ದರ ಸಾರಾಂಶವೆನೆಂದರೆ, ನಾನು ಇಂದು ದಿನಾಂಕ 17/08/2020 ರಂದು ಶಹಾಪೂರ ಪೊಲೀಸ್ ಠಾಣೆಯಲ್ಲಿ ಇದ್ದಾಗ ಹಳಿಸಗರದ ಹನುಮಾನ ಗುಡಿಯ ಮುಂದೆ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿ-ಸಂಖ್ಯೆಗಳು ಬರೆದುಕೊಳ್ಳುತಿದ್ದಾನೆ ಅಂತ ಖಚಿತ ಮಾಹಿತಿ ಬಂದ ಮೆರೆಗೆ, ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈ ಕೊಳ್ಳುವ ಕುರಿತು ಮಾನ್ಯ ಪ್ರಧಾನ ಜೆ.ಎಮ್.ಎಪ್.ಸಿ ನ್ಯಾಯಾಲಯ ಶಹಾಪುರ ರವರಿಗೆ ಪತ್ರ ವ್ಯವಹಾರ ಮಾಡಿ 14-15 ಗಂಟೆಗೆ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಠಾಣೆಯಲ್ಲಿ ಹಾಜರಿದ್ದ ಸಿಬ್ಬಂದಿಯವರಾದ ನಾರಾಯಣ ಹೆಚ್.ಸಿ.49. ಶರಣಪ್ಪ ಹೆಚ್.ಸಿ.164. ಗೋಕುಲ್ ಹುಸೇನ್ ಪಿ.ಸಿ. 172. ಬಾಗಣ್ಣ ಪಿ.ಸಿ.194. ಜೀಪಚಾಲಕ ನಾಗರೆಡ್ಡಿ ಎ.ಪಿ.ಸಿ.161. ರವರಿಗೆ ಮಾಹಿತಿ ತಿಳಿಸಿ ದಾಳಿ ಕುರಿತು ಹೋಗುವ ಸಂಬಂಧ ಇಬ್ಬರೂ ಪಂಚರನ್ನು ಕರೆದುಕೊಂಡು ಬರಲು ಗೋಕುಲ್ ಹುಸೇನ್ ಪಿ.ಸಿ 172. ರವರಿಗೆ 14-20 ಗಂಟೆಗೆ ಕಳುಹಿಸಿಕೊಟ್ಟಿದ್ದು, ಸದರಿಯವರು ನಗರದಲ್ಲಿ ಹೋಗಿ ಇಬ್ಬರೂ ಪಂಚರಾದ 1] ಶ್ರೀ ಶರಣು ತಂದೆ ಶಿವಪ್ಪ ಅಂಗಡಿ ವ|| 27 ಉ|| ಕೂಲಿ ಕೆಲಸ ಜಾ|| ಲಿಂಗಾಯತ ಸಾ|| ಹಳಿಸಗರ ಶಹಾಪೂರ  2] ಅಂಬಲಪ್ಪ ತಂದೆ ಭೀಮಪ್ಪ ಐಕೂರ ವ|| 49 ಉ|| ಕೂಲಿ ಕೆಲಸ ಸಾ|| ದೇವಿನಗರ ಶಹಾಪೂರ ಇವರನ್ನು 14-30 ಗಂಟೆಗೆ ಠಾಣೆಗೆ ಕರೆದುಕೊಂಡು ಬಂದಿದ್ದು, ಸದರಿಯವರಿಗೆ ನಾನು ವಿಷಯ ತಿಳಿಸಿ ದಾಳಿಯ ಕಾಲಕ್ಕೆ ನಮ್ಮ ಜೋತೆಯಲ್ಲಿ ಬಂದು ಪಂಚರಾಗಲು ಕೇಳಿಕೊಂಡ ಮೇರೆಗೆ ಒಪ್ಪಿಕೊಂಡರು. ಮೇಲಾಧಿಕಾರಿಯವರ  ಮಾರ್ಗದರ್ಶನದಲ್ಲಿ. ನಾನು ಮತ್ತು ಮೇಲ್ಕಂಡ ಸಿಬ್ಬಂದಿಯವರು, ಹಾಗೂ ಪಂಚರು ಎಲ್ಲರು ಠಾಣೆಯ ಜೀಪ ನಂ ಕೆಎ-33ಜಿ-0138 ನೇದ್ದರಲ್ಲಿ ಕುಳಿತುಕೊಂಡು ದಾಳಿ ಕುರಿತು ಠಾಣೆಯಿಂದ 14-35 ಗಂಟೆಗೆ ಹೊರಟೇವು. ಸದರಿ ಜೀಪನ್ನು ನಗರೆಡ್ಡಿ ಎ.ಪಿ.ಸಿ.161. ರವರು ಚಲಾಯಿಸುತ್ತ ನೇರವಾಗಿ ಹನುಮಾನ ಗುಡಿಯ ಹತ್ತಿರ ಸ್ಪಲ್ಪ ದೂರದಲ್ಲಿ 14-45 ಗಂಟೆಗೆ ಹೋಗಿ ಜೀಪ್ ನಿಲ್ಲಿಸಿ ಜೀಪಿನಿಂದ ನಾವು ಎಲ್ಲರು ಇಳಿದು ಅಲ್ಲಿಂದ ಹನುಮಾನ ಗುಡಿಯ ಹತ್ತಿರ ನಡೆದುಕೊಂಡು ಹೋಗಿ ಸುಮಾರು 15 ಮೀಟರ ದೂರದಲ್ಲಿ ನಿಂತು ನಿಗಾ ಮಾಡಿ ನೋಡಲಾಗಿ ಹನುಮಾನ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾವಾದ ಮಟಕಾ ಅಂಕಿ ಸಂಖ್ಯೆ ಬರೆದುಕೊಳ್ಳುತಿದ್ದ ಸದರಿಯವನು ಮಟಕಾ ಅಂಕಿ ಸಂಖ್ಯೆಗಳು ಬರೆದುಕೊಳ್ಳುತಿದ್ದ ಬಗ್ಗೆ ಪಂಚರ ಸಮಕ್ಷಮದಲ್ಲಿ ಖಚಿತ ಪಡಿಸಿಕೊಂಡು, ನಾನು ಮತ್ತು ಸಿಬ್ಬಂದಿಯವರು 14-55 ಗಂಟೆಗೆ ದಾಳಿ ಮಾಡಿದಾಗ ಮಟಕಾ ಅಂಕಿ ಸಂಖ್ಯೆಗಳನ್ನು ಬರೆಸಲು ಬಂದ ಜನರು ಓಡಿ ಹೋಗಿದ್ದು, ಮಟಕಾ ಅಂಕಿ ಸಂಖ್ಯೆ ಬರೆದುಕೊಳ್ಳುತಿದ್ದ ವ್ಯಕ್ತಿ ಸಿಕ್ಕಿದ್ದು ಸದರಿಯವನ ಹೆಸರು ವಿಳಾಸ ವಿಚಾರಿಸಲು ಬಸವರಾಜ ತಂದೆ ಶಂಕ್ರೇಪ್ಪ ಬೋಯರ ವ|| 29 ಜಾ|| ಕಬ್ಬಲಿಗ ಉ|| ಮಟಕಾಬರೆದುಕೊಳ್ಳುವದು ಸಾ|| ಹಳಿಸಗರ ಶಹಾಪೂರ ಅಂತ ಹೇಳಿದನು. ಈತನ ಹತ್ತಿರ ನಗದು ಹಣ 3210-00 ರೂಪಾಯಿ ಮತ್ತು 1 ಬಾಲ್ ಪೆನ್ ಸಿಕ್ಕಿದ್ದು ಹಾಗೂ 2 ಮಟಕಾ ಚೀಟಿಗಳು, ಸದರಿಯವನಿಗೆ ಸಿಕ್ಕ ಮುದ್ದೆಮಾಲಿನ ಬಗ್ಗೆ ವಿಚಾರಣೆ ಮಾಡಲಾಗಿ ಸಾರ್ವಜನಿಕರಿಂದ ಮಟಕಾ ಅಂಕಿ ಸಂಖ್ಯೆಗಳು ಬರೆದುಕೊಂಡ ಚೀಟಿ ಮತ್ತು ಮಟಕಾ ಅಂಕಿಗಳನ್ನು ಬರೆಯಲು ಉಪಯೋಗಿಸಿದ ಪೆನ್ನು ಇದೆ ಇರುತ್ತದೆ. ಸದರಿ ಹಣ ಮಟಕಾ ನಂಬರಗಳು ಬರೆದುಕೊಂಡಿದ್ದರಿಂದ ಜಮಾ ಆದ ಹಣ ಅಂತ ಹೇಳಿದನು. ನಗದು ಹಣ 3210-00 ರೂಪಾಯಿ ಮತ್ತು 2 ಮಟಕಾ ಚೀಟಿಗಳು ಹಾಗೂ ಒಂದು ಬಾಲ್ ಪೆನ್ ಒಂದು ಲಕೋಟೆಯಲ್ಲಿ ಹಾಕಿಕೊಂಡು, ನಾನು ಮತ್ತು ಪಂಚರು ಜಂಟಿಯಾಗಿ ಸಹಿ ಮಾಡಿದ ಚೀಟಿ ಅಂಟಿಸಿ ಕೇಸಿನ ಮುಂದಿನ ಪುರಾವೆ ಕುರಿತು 15-00 ಗಂಟೆಯಿಂದ 16-00 ಗಂಟೆಯವರೆಗೆ ಜಪ್ತಿ ಪಂಚನಾಮೆ ಮೂಲಕ ತಾಬೆಗೆ ತೆಗೆದುಕೊಂಡೆನು. ದಾಳಿಯಲ್ಲಿ ಸಿಕ್ಕ ವ್ಯಕ್ತಿಯನ್ನು ತಾಬೆಗೆ ತೆಗೆದುಕೊಂಡು ಎಲ್ಲರೂ ಕೂಡಿ ಮರಳಿ ಠಾಣೆಗೆ 16-20 ಗಂಟೆಗೆ ಬಂದಿದ್ದು, ಠಾಣೆಯಲ್ಲಿ ಆರೋಪಿತನ ವಿರುದ್ದ ವರದಿಯನ್ನು ತಯ್ಯಾರಿಸಿ, ಆರೋಪಿ ಮತ್ತು ಮೂಲ ಜಪ್ತಿ ಪಂಚನಾಮೆ ಹಾಗೂ ಮುದ್ದೆಮಾಲು ಹಾಜರು ಪಡಿಸಿ, ಸರಕಾರದ ಪರವಾಗಿ 17-00 ಗಂಟೆಗೆ ವರದಿ  ಸಲ್ಲಿಸಿದ್ದರ ಸಾರಾಂಶದ ಮೇಲಿಂದ  ಶಹಾಪೂರ ಠಾಣೆಯ ಗುನ್ನೆ ನಂ 223/2020 ಕಲಂ 78(3) ಕೆ.ಪಿ.ಆ್ಯಕ್ಟ ನ್ನೆದ್ದರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

ಕೆಂಭಾವಿ ಪೊಲೀಸ ಠಾಣೆ ಗುನ್ನೆ ನಂ:- 127/2020 ಕಲಂ: 87 ಕೆಪಿ ಯಾಕ್ಟ : ದಿನಾಂಕ:17.08.2020 ರಂದು 05.30 ಗಂಟೆಗೆ ಕೆಂಭಾವಿ ಪೊಲೀಸ್ ಠಾಣೆಯ ಹದ್ದಿಯ ಪೈಕಿ ದಂಡಸೊಲ್ಲಾಪೂರ ಗ್ರಾಮದ ಕಡೆಗೆ ಪೆಟ್ರೋಲಿಂಗ ಕುರಿತು ಹೋದಾಗ ಸದರ ಗ್ರಾಮದ ಹನುಮಾನ ದೇವರ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕೆಲವು ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಅಂದರ್-ಬಾಹರ್ ಎನ್ನುವ ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಬಾತ್ಮಿ ಬಂದ ಮೇರೆಗೆ ನಾನು ಖುದ್ದಾಗಿ ಸ್ಥಳಕ್ಕೆ ಹೋಗಿ ಮರೆಯಾಗಿ ನಿಂತು ನೋಡಲು ಸುಮಾರು 05-06 ಜನರು ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಎನ್ನುವ ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ 05.40 ಗಂಟೆಗೆ ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಂಡು ನಂತರ ಠಾಣೆಗೆ 06.00 ಗಂಟೆಗೆ ಬಂದು ಮಾನ್ಯ ಜೆ.ಎಮ್.ಎಫ್.ಸಿ ನ್ಯಾಯಾಲಯ ಸುರಪೂರಕ್ಕೆ  ಗುನ್ನೆ ದಾಖಲಿಸಿಕೊಂಡು ದಾಳಿ ಮಾಡಲು ಅನುಮತಿ ಕೊಡುವ ಕುರಿತು ಪತ್ರ ಬರೆದು ಮಾನ್ಯ ನ್ಯಾಯಾಲಯಕ್ಕೆ ಕೋರಿಕೊಂಡಿದ್ದು ಮಾನ್ಯ ನ್ಯಾಯಾಲಯವು ಅನುಮತಿ ನೀಡಿದ್ದರಿಂದ ನೀವು ಈ ಬಗ್ಗೆ ಪ್ರಕರಣ ದಾಖಲಿಸಲು ಸೂಚಿಸಿದ್ದು ಸದರಿ ಜ್ಞಾಪನ ಪತ್ರದ ಸಾರಾಂಶದ ಮೇಲಿಂದ ಕೆಂಭಾವಿ ಠಾಣೆ ಗುನ್ನೆ ನಂ. 127/2020 ಕಲಂ : 87 ಕೆಪಿ ಆಕ್ಟ ನೇದ್ದರ ಅಡಿಯಲ್ಲಿ ಗುನ್ನೆ ದಾಖಲಿಸಿಕೊಂಡೆನು. ನಂತರ ಪಿರ್ಯಾದಿದಾರರು ದಾಳಿ ಕೈಕೊಂಡಿದ್ದು ದಾಳಿಯಲ್ಲಿ 06 ಜನ ಆರೋಪಿತರಿಗೆ ದಸ್ತಗಿರಿ ಮಾಡಿದ್ದು ಕಣದಲ್ಲಿ ಸಿಕ್ಕ 28000/- ರೂಪಾಯಿ ನಗದು ಹಣ ಹಾಗು 52 ಇಸ್ಪೀಟ ಎಲೆಗಳನ್ನು ಹಾಗು 1 ಬಿಳಿ ಬರಕಾವನ್ನು ಜಪ್ತ ಪಡಿಸಿಕೊಂಡಿದ್ದು ಇರುತ್ತದೆ ಅಂತ ಮಾನ್ಯರವರಲ್ಲಿ ವಿನಂತಿ ಇರುತ್ತದೆ.


 



ನಿಮ್ಮ ಅಧಿಕಾರಿಗಳನ್ನು ತಿಳಿಯಿರಿ

ಪೊಲೀಸ್ ಅಧೀಕ್ಷಕರು ಯಾದಗಿರಿ ಜಿಲ್ಲೆ

Rishikesh Bhagawan Sonawane IPS

ಅಧಿಕಾರಿ ಹೆಸರು ದೂರವಾಣಿ ಸಂಖ್ಯೆ
ಡಿ.ಎಸ್.ಪಿ ಶೋರಾಪೂರ ಉಪ-ವಿಭಾಗ 9480803637
ಡಿ.ಎಸ್.ಪಿ ಯಾದಗಿರಿ ಉಪ-ವಿಭಾಗ 9480803526
ಜಿಲ್ಲಾ ಪೊಲೀಸ್ ನಿಸ್ತಂತು ಕೊಣೆ ಯಾದಗಿರಿ 9480803600

ಪ್ರಮುಖವಾದ ಲಿಂಕ್ಗಳು

ಫೋಟೋ ಗ್ಯಾಲರಿ

ಜನಪ್ರಿಯ ಪೋಸ್ಟ್ಗಳು

We are in Facebook

Keep on visiting www.yadgirpolice.in for daily updates from us. .Messege us in facebook

Meet Us in FB!!